ಹುಬ್ಬಳ್ಳಿ: ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಜುಲೈ ೨೦ರಂದು ಉತ್ತರ ಕನ್ನಡ ಜಿಲ್ಲೆಯ ಶಿರೂರ ಬಳಿ ಸಂಭವಿಸಿದ ಗುಡ್ಡ ಕುಸಿದ ಸ್ಥಳಕ್ಕೆ ಬೆಳಿಗ್ಗೆ ೧೧ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಬೆಳಿಗ್ಗೆ ೫ .೧೫ಕ್ಕೆ ದೆಹಲಿ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಬೆಳಿಗ್ಗೆ ೮.೨೫ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ೮.೪೫ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ (ಬಳುಗುಳಿ ಕ್ರಾಸ್ ಮಾರ್ಗ) ಶಿರೂರಿಗೆ ಭೇಟಿ ನೀಡುವರು. ಅಲ್ಲಿ ಬೆಳಿಗ್ಗೆ ೧೧ರಿಂದ ೧೨ರವರೆಗೆ ಸ್ಥಳ ಪರಿಶೀಲನೆ ನಡೆಸುವರು. ನಂತರ ರಸ್ತೆ ಮಾರ್ಗವಾಗಿ ಗೋವಾಕ್ಕೆ ತೆರಳಿ ಅಲ್ಲಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.