ನಾವು ಧರ್ಮ ಕಾಪಾಡಿಕೊಳ್ಳಬೇಕು

0
49

ಮಂಗಳೂರು: “ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ. ನಾವು ಧರ್ಮವನ್ನು ಕಾಪಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೆ ಭೇಟಿ ಮಾಡಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

“ಈ ಧರ್ಮಕ್ಷೇತ್ರ ಜನಸೇವೆ, ಸಾಮಾಜಿಕ, ಶೈಕ್ಷಣಿಕ ಸೇವೆ ಮಾಡಿಕೊಂಡು ಬಂದಿದೆ. ಇದಕ್ಕೆ ಸಹಕಾರ ನೀಡಬೇಕಾಗಿರುವುದು ನಮ್ಮ ಕರ್ತವ್ಯ” ಎಂದರು.

“ಕರಾವಳಿ ನಮ್ಮ ರಾಜ್ಯದ ಮುಖ್ಯವಾದ ಅಂಗ. ಮನುಷ್ಯನಿಗೆ ದೇಹದ ಅಂಗಗಳು ಎಷ್ಟು ಮುಖ್ಯವೋ, ಕರಾವಳಿ ಭಾಗವೂ ಅಷ್ಟೇ ಮುಖ್ಯ” ಎಂದು ತಿಳಿಸಿದರು.

Previous articleಕಾರವಾರದಲ್ಲಿ ಮಾಜಿ ನಗರಸಭಾ ಸದಸ್ಯನ ಹತ್ಯೆ: ಹಣದ ವ್ಯವಹಾರಕ್ಕೆ ನಡೆದ ಗಲಾಟೆಯಲ್ಲಿ ಕೊಲೆ
Next articleಜಾತಿ ಗಣತಿ ವರದಿ ಅನುಷ್ಠಾನ:ವಿರೋಧಿಸುವವರಿಗೆ ರಾಜಕೀಯ ಅಸ್ತಿತ್ವದ ಭಯ