ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

0
9

ಹೊಸಪೇಟೆ: ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ನಗರದ ನಿವಾಸಿ ನಿಹಾಲ್‌ (28) ಮೃತಪಟ್ಟ ಬೈಕ್‌ ಸವಾರ. ಹಿಂಬದಿಯಲ್ಲಿ ಕುಳಿತಿದ್ದ ಅಭಿಲಾಷ್‌ ಎಂಬವರು ತೀವ್ರ ಗಾಯಗೊಂಡಿದ್ದು, ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳ್ಳಾರಿ ವಿಮ್ಸ್‌ಗೆ ರವಾನಿಸಲಾಗಿದೆ. ಹಗರಿಬೊಮ್ಮನಹಳ್ಳಿಯಿಂದ ನಗರಕ್ಕೆ ಬರುತ್ತಿದ್ದಾಗ ಮರಿಯಮ್ಮನಹಳ್ಳಿಯ ರಾಯಲ್ ಸ್ಟಾಗ್ ಹೊಟೇಲ್ ಬಳಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಮರಿಯಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ವಿಶ್ವದರ್ಜೆಯ ಸ್ಪರ್ಶ
Next articleತೀವ್ರಗೊಂಡ ಮಳೆ: ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ