Home ತಾಜಾ ಸುದ್ದಿ ನಿಮ್ಮೆಲ್ಲರ ಆಶೀರ್ವಾದದಿಂದ ಗುಣಮುಖನಾಗಿದ್ದೇನೆ

ನಿಮ್ಮೆಲ್ಲರ ಆಶೀರ್ವಾದದಿಂದ ಗುಣಮುಖನಾಗಿದ್ದೇನೆ

0

ದಾವಣಗೆರೆ: ಅನಾರೋಗ್ಯ ನಿಮಿತ್ತ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಮ್ಮೆಲ್ಲರ ಆಶೀರ್ವಾದದಿಂದ ಗುಣಮುಖನಾಗಿದ್ದೇನೆ. ಶೀಘ್ರದಲ್ಲಿಯೇ ದಾವಣಗೆರೆಗೆ ಆಗಮಿಸುತ್ತೇನೆ ಎಂದು ವಿಡಿಯೋವೊಂದರಲ್ಲಿ ಖುಷಿ ಹಂಚಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಅವರು, ಈಗ ಆರೋಗ್ಯವಾಗಿದ್ದೇನೆ. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದಿದ್ದು, ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ. 2025ರ ಹೊಸ ವರ್ಷಾಚರಣೆಗೆ ಇನ್ನೂ ಎರಡು ದಿನಗಳು ಬಾಕಿ ಇದ್ದು, ಅಷ್ಟೊತ್ತಿಗೆ ಸಂಪೂರ್ಣ ಗುಣಮುಖನಾಗುತ್ತೇನೆ. ದಾವಣಗೆರೆಗೆ ಆಗಮಿಸಿ ಹೊಸ ವರ್ಷಾಚರಣೆ ಆಚರಿಸೋಣ ಎಂದು ಹೇಳಿದ್ದಾರೆ.

Exit mobile version