ನೂತನ ಚುನಾವಣಾ ಆಯುಕ್ತರ ನೇಮಕ

0
16

ನವದೆಹಲಿ: ಕೇಂದ್ರ ಸರ್ಕಾರವು ಪಂಜಾಬ್‌ನ ಬಿ. ಸುಖಬೀರ್‌ ಸಂಧು ಹಾಗೂ ಕೇರಳದ ಜ್ಞಾನೇಶ್‌ ಕುಮಾರ್‌ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಅವರಿರುವ ಆಯ್ಕೆ ಸಮಿತಿ ಸಭೆಯಲ್ಲಿ ನೇಮಕ ಮಾಡಲಾಗಿದೆ. ಚುನಾವಣಾ ಆಯೋಗದ ಆಯುಕ್ತರನ್ನಾಗಿ ನೇಮಿಸಲು 212 ಅಧಿಕಾರಿಗಳ ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು. ಇವರಲ್ಲಿ ಇಬ್ಬರನ್ನು ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ. ಆಯುಕ್ತರ ನೇಮಕದಿಂದಾಗಿ ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ದಿನಾಂಕ ಪ್ರಕಟಿಸಲಾಗತ್ತದೆ ಎಂದು ಹೇಳಲಾಗುತ್ತಿದೆ.

Previous article‘ಒಂದು ರಾಷ್ಟ್ರ, ಒಂದು ಚುನಾವಣೆ’: ರಾಷ್ಟ್ರಪತಿಗೆ ವರದಿ ಸಲ್ಲಿಕೆ
Next articleಕಾರ್ಯಕರ್ತರಿಂದ ಬಿಜೆಪಿ‌ ಕಚೇರಿ ಮೇಲೆ ದಾಳಿ: ಸಂಗಣ್ಣಗೆ ಟಿಕೆಟ್ ತಪ್ಪಿದ್ದಕ್ಕೆ ಬೆಂಬಲಿಗರ ಆಕ್ರೋಶ