ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕಾರ

0
30

ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ಎಸ್‌ಕೆಐಸಿಸಿ) ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಒಮರ್ ಮತ್ತು ಅವರ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಇಂದು ಪ್ರಮಾಣ ವಚನ ಸ್ವೀಕರಿಸುವ ಮುನ್ನ ಒಮರ್ ಅಬ್ದುಲ್ಲಾ ಅವರು ಶ್ರೀನಗರದಲ್ಲಿರುವ ಶೇಕ್ ಮೊಹಮ್ಮದ್ ಅಬ್ದುಲ್ಲಾ ಅವರ ಮಜರ್-ಎ-ಅನ್ವರ್‌ನಲ್ಲಿ ನಮನ ಸಲ್ಲಿಸಿದರು. ಸಂಪುಟ ಸಚಿವರಾಗಿ ಸುರೇಂದ್ರ ಚೌಧರಿ, ಸಕೀನಾ, ಜಾವೇದ್ ಅಹ್ಮದ್ ರಾಣಾ, ಜಾವೇದ್ ದಾರ್, ಸತೀಶ್​ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸಮಾರಂಭದಲ್ಲಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇಂಡಿಯಾ ಮೈತ್ರಿಕೂಟದ ನಾಯಕರು ಹಾಜರಿದ್ದರು.

Previous articleಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ.ಮರೀಗೌಡ ರಾಜೀನಾಮೆ
Next articleಲೋನ್ ಸೆಕ್ಯೂರಿಟಿ ನೀಡದೆ ಪಡೆದಿದ್ದು ಹೇಗೆ ಹೇಳಲಿ ?