ನೂತನ ವಿಮಾನ ನಿಲ್ದಾಣ ಉದ್ಘಾಟನೆ

0
19

ಶಿವಮೊಗ್ಗ: ಶಿವಮೊಗ್ಗಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಭೇಟಿ ನೀಡಿದ್ದು, ಸೋಗಾನೆಯಲ್ಲಿ ರೂ.600 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ್ದಾರೆ. ನವದದೆಹಲಿಯಿಂದ ಸೇನಾ ವಿಮಾನದಲ್ಲಿ ಬಂದ ಮೋದಿಯವರು ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ನೇರವಾಗಿ ಬಂದಿಳಿದರು.
ಬಳಿಕ ವಿಮಾನ ನಿಲ್ದಾಣವನ್ನು ಮೋದಿಯವರು ಉದ್ಘಾಟನೆ ಮಾಡಿ, ಸಮಾರಂಭ ವೇದಿಕೆಯಲ್ಲಿ ಮೋದಿಯವರಿಗೆ ಶಾಲು ಹೊದಿಸಿ ಈಶ್ವರಪ್ಪ ಅವರು ಸನ್ಮಾನಿಸಿದರು. ಬಳಿಕ ಮೋದಿಯವರಿಗೆ ವಿಶೇಷ ಪೇಟ ತೊಡಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ. ಶಿವಮೊಗ್ಗ ಏರ್​ಪೋರ್ಟ್​ ಕಲಾಕೃತಿಯನ್ನು ಕಾಣಿಕೆ ನೀಡಿದರು.

Previous articleವಿಮಾನ ನಿಲ್ದಾಣ ಆವರಣದಲ್ಲಿ ಆಕಸ್ಮಿಕ ಬೆಂಕಿ
Next articleಸಾಮಾನ್ಯರಲ್ಲಿ ಸಾಮಾನ್ಯರಿಗೂ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ: ಪ್ರಲ್ಹಾದ ಜೋಶಿ