SK Home Ad
Home ತಾಜಾ ಸುದ್ದಿ ನ. 13ರಂದು ರಾಜ್ಯದಲ್ಲಿ ಉಪಚುನಾವಣೆ

ನ. 13ರಂದು ರಾಜ್ಯದಲ್ಲಿ ಉಪಚುನಾವಣೆ

0
195

ನವದೆಹಲಿ: ರಾಜ್ಯದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಇಂದು ಚುನಾವಣಾ ಆಯೋಗ ಪ್ರಕಟಿಸಿದೆ.
ಶಿಗ್ಗಾಂವಿ, ಚನ್ನಪಟ್ಟಣ ಹಾಗೂ ಸಂಡೂರು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ನವೆಂಬರ್‌ 13ರಂದು ಮತದಾನ ನಡೆಯಲಿದೆ. ನವೆಂಬರ್‌ 23ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್ ತಿಳಿಸಿದ್ದಾರೆ.
ಒಟ್ಟು 15 ರಾಜ್ಯಗಳ 48 ವಿಧಾನಸಭೆ ಮತ್ತು 2 ಲೋಕಸಭೆ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಪ್ರಕಟಿಸಲಾಗಿದೆ.