Home ಅಪರಾಧ ಪಟಾಕಿ‌ ಅಂಗಡಿಯಲ್ಲಿ ಬೆಂಕಿ ಅವಘಡ

ಪಟಾಕಿ‌ ಅಂಗಡಿಯಲ್ಲಿ ಬೆಂಕಿ ಅವಘಡ

0

ಬೆಂಗಳೂರು: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂ. ನಷ್ಟವಾದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ.
ಅತ್ತಿಬೆಲೆ ಗಡಿಯಲ್ಲಿನ ಬಾಲಾಜಿ ಕ್ರಾಕರ್ಸ್ ಎಂಬ ಪಟಾಕಿ ಮಳಿಗೆಯಲ್ಲಿ ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ಕಿಡಿಯಿಂದ ಇಡೀ ಅಂಗಡಿ ಸ್ಫೋಟಗೊಂಡಿದೆ. ದೀಪಾವಳಿಗಾಗಿ ವಿಶೇಷ ಪಟಾಕಿ ಲೋಡ್ ಲಾರಿಯಿಂದ ಇಳಿಸುವ ಸಂದರ್ಭದಲ್ಲಿ ಈ ಅಚಾತುರ್ಯ ನಡೆದಿದೆ. ನವೀನ್ ಎಂಬುವರಿಗೆ ಸೇರಿದ ಪಟಾಕಿ ಮಳಿಗೆಯಲ್ಲಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಬೆಂಕಿ ಸಂಪೂರ್ಣ ನಂದಿಸಿದ ಬಳಿಕ ಮಳಿಗೆ ಒಳಗೆ ಕಾರ್ಮಿಕರು ಸಿಲುಕಿರುವ ಬಗ್ಗೆ ಮಾಹಿತಿ ಸಿಗಲಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಮತ್ತು ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.

Exit mobile version