ಪಟಾಕಿ ಕಾರ್ಖಾನೆಗಳಲ್ಲಿ ಸ್ಫೋಟ: 9ಜನ ಸಾವು

0
15

ಚೆನ್ನೈ: ತಮಿಳುನಾಡಿನ ಕಮ್ಮಪಟ್ಟಿ ಗ್ರಾಮದಲ್ಲಿರುವ ಎರಡು ಪಟಾಕಿ ಕಾರ್ಖಾನೆಗಳಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 9ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ ಶಿವಕಾಶಿ ಬಳಿಯ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಮೊದಲ ಸ್ಫೋಟ ಸಂಭವಿಸಿದೆ. ಇದಾದ ಕೆಲವೇ ಕ್ಷಣದಲ್ಲಿ ಕಮ್ಮಪಟ್ಟಿ ಗ್ರಾಮದ ಮತ್ತೊಂದು ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಎರಡು ಸ್ಫೋಟದಲ್ಲಿ ಸೇರಿ ಒಂಬತ್ತು ಜನ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಸ್ಫೋಟಕ್ಕೆ ಕಾರಣಗಳು ಇನ್ನೂ ಪತ್ತೆಯಾಗಿಲ್ಲ.

Previous articleಕಾರು, ಗೂಡ್ಸ್ ವಾಹನ ಡಿಕ್ಕಿ: ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು
Next articleಭಗವಾಧ್ವಜ ಹಾಕಿದ ಮಳಿಗೆಯಲ್ಲಿ ವ್ಯಾಪಾರಕ್ಕೆ ಸೂಚನೆ