Home ತಾಜಾ ಸುದ್ದಿ ಪದವಿ ಪೂರ್ವ ಕಾಲೇಜಿಗಾಗಿ ಅಕ್ಷರ ಸಂತ ಹಾಜಬ್ಬನ ಮನವಿ

ಪದವಿ ಪೂರ್ವ ಕಾಲೇಜಿಗಾಗಿ ಅಕ್ಷರ ಸಂತ ಹಾಜಬ್ಬನ ಮನವಿ

0

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಂಗಳೂರು ತಾಲೂಕಿನ ಹರೇಕಳ ನ್ಯೂಪಡ್ಪುವಿನ ಸರ್ಕಾರಿ ಪ್ರೌಢಶಾಲೆಯನ್ನು ಪದವಿ ಪೂರ್ವ ಕಾಲೇಜಾಗಿ ಮೇಲ್ದರ್ಜೆಗೇರಿಸಲು ಮನವಿ ಸಲ್ಲಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ಇರುವ ಕೊಣಾಜೆ ಸಮೀಪದ ಹರೇಕಳದಲ್ಲಿ ಗ್ರಾಮೀಣ ಮಕ್ಕಳಲ್ಲಿ ಶಾಲೆಯ ಸೌಲಭ್ಯ ಇರಲಿಲ್ಲ. ಮಂಗಳೂರಿನ ಕೇಂದ್ರ ಪ್ರದೇಶ ಸ್ಟೇಟ್ ಬ್ಯಾಂಕ್ ಸರ್ಕಲಿನಲ್ಲಿ ಕಿತ್ತಳೆ ಹಣ್ಣು ಮಾರಾಟ ಮಾಡುವ ಕಾಯಕ ಮಾಡುತ್ತಿದ್ದ ಹಾಜಬ್ಬ ತಾವೇ ಶಾಲೆಯೊಂದನ್ನು ತನ್ನೂರಿನಲ್ಲಿ ನಿರ್ಮಿಸಿದ್ದರು ಈಗ ಆ ಶಾಲೆಯನ್ನು ಪದವಿ ಪೂರ್ವ ಕಾಲೇಜ ಆಗಿ ಮೇಲ್ದರ್ಜೆಗೇರಿಸಲು ಆಶಯ ಹೊಂದಿದ್ದು, ಇಂದು ಸಿಎಂಗೆ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ.

Exit mobile version