ಪದ್ಮಶ್ರೀ ಪ್ರಶಸ್ತಿಗೆ ಬಾಜನರಾದ ವೆಂಕಪ್ಪ ಅಂಬಾಜಿಗೆ ಗೌರವ ಸನ್ಮಾನ

0
103

71 ವರ್ಷಗಳಿಂದ ಗೊಂದಳಿ ಪದಗಳನ್ನು ಹಾಡುತ್ತಿದ್ದು ಜನಪದ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ

ನವದೆಹಲಿ: ಪದ್ಮಶ್ರೀ ಪ್ರಶಸ್ತಿಗೆ ಬಾಜನರಾದ ಗೊಂದಳಿ ಕಲಾವಿದ ವೆಂಕಪ್ಪ ಅಂಬಾಜಿ ಸುಗತೇಕರ್‌ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸನ್ಮಾನಿಸಿ ಗೌರವಿಸಿದ್ದಾರೆ
ದೆಹಲಿಯ ನಿವಾಸದಲ್ಲಿ 2025ರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ನಮ್ಮ ರಾಜ್ಯದ ಬಾಗಲಕೋಟೆ ಜಿಲ್ಲೆಯ ಜಾನಪದ ಗಾಯಕ, ಗೊಂದಳಿ ಕಲಾವಿದ ವೆಂಕಪ್ಪ ಅಂಬಾಜಿ ಸುಗತೇಕರ್‌ ಅವರನ್ನು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದ್ದಾರೆ. ಗೊಂದಳಿ ಹಾಡಿನ ಮೂಲಕ ಸುದೀರ್ಘ ಕಲಾಸೇವೆ ಮಾಡಿಕೊಂಡಿರುವ ಇವರು 71 ವರ್ಷಗಳಿಂದ ಗೊಂದಳಿ ಪದಗಳನ್ನು ಹಾಡುತ್ತಿದ್ದು ಜನಪದ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದಲ್ಲೂ ಅವರನ್ನು ಕೊಂಡಾಡಿದ್ದರು. ಅತ್ಯಂತ ಬಡ ಕುಟುಂಬದಲ್ಲಿ ಜನಿಸಿ ಶಾಲೆಗೆ ಹೋಗಿ ಓದು ಬರಹ ಕಲಿಯುವ ಅವಕಾಶ ಸಿಗದಿದ್ದರೂ ಇಂದು ಸಹಸ್ರಾರು ಹಾಡುಗಳನ್ನು ಜ್ಞಾಪಕ ಶಕ್ತಿಯಿಂದಲೇ, ಬಾಯಿಪಾಠದ ಮೂಲಕವೇ ಹಾಡಿ ಅಪಾರ ಜನಪ್ರಿಯತೆ ಹೊಂದಿದ್ದಾರೆ
ಅವರಿಗೆ ಇಂದು ಆತ್ಮೀಯತೆಯಿಂದ ಅಭಿನಂದಿಸಿ ಪುಟ್ಟ ಗೌರವ ನಮನಗಳನ್ನು ಸಲ್ಲಿಸುವ ಸದಾವಕಾಶ ಒದಗಿ ಬಂದಿದ್ದು ನನಗೆ ಅತ್ಯಂತ ಸಂತೋಷ ತಂದಿದೆ ಎಂದಿದ್ದಾರೆ.

Previous articleಮೈಕ್ರೋ ಫೈನಾನ್ಸ್ ಹಾವಳಿಗೆ ಬ್ರೇಕ್ ಬೀಳುತ್ತೆ…
Next articleಪೊಲೀಸ್ ಪೇದೆ ನಯಾಜ್ ಅಂಜುಮ್‌ಗೆ ರಾಷ್ಟ್ರಪತಿ ಪದಕ