Home ನಮ್ಮ ಜಿಲ್ಲೆ ಉತ್ತರ ಕನ್ನಡ ಪರಿಸರ ಪ್ರೇಮಿ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ!

ಪರಿಸರ ಪ್ರೇಮಿ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ!

0

ಕಾರವಾರ: ಪರಿಸರ ಪ್ರೇಮಿ ಪದ್ಮಶ್ರೀ ಪುರಸ್ಕೃತೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡ (೮೬)ಸೋಮವಾರ ನಿಧನರಾಗಿದ್ದಾರೆ.
ವಯೊ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿ ಗೌಡ ಹೊನ್ನಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳಸಿದ್ದ ತುಳಸಿಗೌಡ ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ಮನೆಯಲ್ಲಿ ತೀರಾ ಬಡತನ ಇದ್ದರೂ ಹಸಿರು ಕ್ರಾಂತಿ ಮಾಡಿದ್ದ ತುಳಸಿಗೌಡಳ ಪರಿಸರ ಪ್ರೇಮವನ್ನು ಮೆಚ್ಚಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಅಂದಿನ ರಾಷ್ಟ್ರಪತಿ ರಮಾನಾಥ ಕೋವಿಂದ ಪದ್ಮಶ್ರೀ ಪ್ರಶಸ್ತಿ ಪ್ರಧಾನ ಮಾಡಿದ್ದರು. ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Exit mobile version