ಪಾಕಿಸ್ತಾನದ ಶೆಲ್ ದಾಳಿ: ಜಮ್ಮು ಕಾಶ್ಮೀರದ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು

0
18

ಶ್ರೀನಗರ: ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿ ಒಮ‌ರ್ ಅಬ್ದುಲ್ಲಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಥಾಪಾ ಅವರ ಅಧಿಕಾರಿ ಸಾವಿಗೆ ಸಂತಾಪ ಸೂಚಿಸಿದ್ದಾರೆ. ರಾಜರಿಯಿಂದ ಆಘಾತಕಾರಿ ಸುದ್ದಿ ನಾವು ರಾಜ್ಯದ ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ಅವರು ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಇದ್ದರು ಮತ್ತು ನಾನು ಅಧ್ಯಕ್ಷತೆ ವಹಿಸಿದ್ದ ಆನ್ಲೈನ್ ಸಭೆಯಲ್ಲಿ ಭಾಗವಹಿಸಿದ್ದರು, ರಾಜೇರಿ ಪಟ್ಟಣದ ಜನವಸತಿ ಪ್ರದೇಶಗುರಿಯಾಗಿಸಿಕೊಂಡು ಪಾಕ್ ದಾಳಿ ನಡೆಸಿದೆ. ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಾಪ್ಪಾ ಸಾವನ್ನಪ್ಪಿದ್ದಾರೆ. ಈ ಭೀಕರ ಜೀವಹಾನಿಗೆ ನನ್ನ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ನನ್ನಲ್ಲಿ ಪದಗಳಿಲ್ಲ, ಅವರ ಆತ್ಮಕ್ಕೆ ಶಾಂತಿಸಿಗಲಿ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

Previous articleಕೊರಳಲ್ಲಿನ ಚಿನ್ನದ ಸರ ಎಗರಿಸಿದ ಚಾಲಾಕಿ ಕಳ್ಳ
Next articleಪಾಕಿಸ್ತಾನದ 5 ವಾಯುನೆಲೆ, 2 ರಾಡಾರ್ ಬೇಸ್ ಧ್ವಂಸ