Home ಅಪರಾಧ ಪಿಎಸ್ಐ ಹಗರಣದಲ್ಲಿ ವಿಚಾರಣೆ ಎದುರಿಸಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು

ಪಿಎಸ್ಐ ಹಗರಣದಲ್ಲಿ ವಿಚಾರಣೆ ಎದುರಿಸಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು

0

ಕಾರವಾರ:  ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆಯಾಗಿದ್ದಾರೆ. ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿ ಭಾಗಿಯಾಗಿದ್ದರು ಎಂಬ ಆರೋಪದಡಿ ಬಂಧಿತರಾಗಿದ್ದ ಗಣಪತಿ ಭಟ್ ತನಿಖೆ ಎದುರಿಸಿದ್ದರು.
ವಿಚಾರಣೆ ಬಳಿಕ ಸಿದ್ದಾಪುರಕ್ಕೆ ಆಗಮಿಸಿದ್ದ ಗಣಪತಿ ಭಟ್ ಮೃತದೇಹ ಅವರ ಸ್ವಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ. ಶವವನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಿದ್ದಾಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

Exit mobile version