ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಸಾವಿಗೀಡಾಗಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ನಿಹಾಮಾ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸೇನೆ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಭಯೋತ್ಪಾದಕರು ಸಾವಿಗೀಡಾಗಿದ್ದಾರೆ. ಹತ್ಯೆಗೀಡಾದ ಭಯೋತ್ಪಾದಕರ ಗುರುತು ಮತ್ತು ಯಾವ ಉಗ್ರ ಸಂಘಟನೆಗೆ ಸೇರಿದವರು ಎಂಬದನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ.