ಪುಲ್ವಾಮಾ ಜಿಲ್ಲೆಯಲ್ಲಿ ಬಸ್ ಪಲ್ಟಿ: ನಾಲ್ವರ ಸಾವು

0
14
BUS

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪ್ರದೇಶದ ಶ್ರೀನಗರ – ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಸಂಚರಿಸುತ್ತಿದ್ದ ಬಸ್​ವೊಂದು ದಿಢೀರ್​ ಪಲ್ಟಿ ಹೊಡೆದ ಪರಿಣಾಮ ನಾಲ್ವರು ಸ್ಥಳೀಯೇತರ ಕಾರ್ಮಿಕರು ಸಾವನ್ನಪ್ಪಿದ್ದು, 24 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆಯಿಂದ ಅನೇಕ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಎಸ್‌ಡಿಹೆಚ್ ಪಾಂಪೋರ್​ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Previous articleಜಮಖಂಡಿ: ನಿಷೇದಾಜ್ಞೆ ಜಾರಿ
Next articleಕೋಲಾರ ಸಿದ್ದರಾಮಯ್ಯ ಸ್ಪರ್ಧೆ ಇನ್ನು ಗೌಪ್ಯ