Home ತಾಜಾ ಸುದ್ದಿ ಪೆನ್‌ಡ್ರೈವ್ ಪ್ರಕರಣ: ರಾಜ್ಯಪಾಲರ ಭೇಟಿ ಮಾಡಿದ HDK ನೇತೃತ್ವದ ನಿಯೋಗ

ಪೆನ್‌ಡ್ರೈವ್ ಪ್ರಕರಣ: ರಾಜ್ಯಪಾಲರ ಭೇಟಿ ಮಾಡಿದ HDK ನೇತೃತ್ವದ ನಿಯೋಗ

0

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಸಂಬಂಧ ಎಚ್​ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ದೂರು ನೀಡಿದೆ.
ಹಾಸನ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ, ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ನಿಯೋಗ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ. ಅಲ್ಲದೇ ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಲು ಜೆಡಿಎಸ್ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ. ಇನ್ನು ವಿಡಿಯೋ ಬಿಡುಗಡೆ ಮಾಡಿದ ಪ್ರಮುಖ ಆರೋಪಿ ಬೆಂಗಳೂರಿನಲ್ಲಿದ್ದು, ಅವನಿಗೆ ಸರ್ಕಾರದಿಂದಲೇ ರಾಜ ಮರ್ಯಾದೆ ಸಿಗುತ್ತಿದೆ. ಇದರ ಹಿಂದೆ ಸರ್ಕಾರದ ಪ್ರಭಾವಿ ನಾಯಕರ ಕೈವಾಡ ಇದೆ. ಕೈವಾಡ ಇರೋ ಆಡಿಯೋ ಮಾಧ್ಯಮಗಳಲ್ಲಿ ಬಂದಿದೆ. ಹೀಗಾಗಿ ಎಸ್‍ಐಟಿ ಇಂದ ನಿಷ್ಪಕ್ಷಪಾತ ತನಿಖೆ ಆಗುತ್ತಿಲ್ಲ ಎಂದು ರಾಜ್ಯಪಾಲರ ಮುಂದೆ ಹೆಚ್‍ಡಿಕೆ ದೂರಿದ್ದಾರೆ.

Exit mobile version