Home ಅಪರಾಧ ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು: ಠಾಣೆ ಮೇಲೆ ಕಲ್ಲು ತೂರಾಟ

ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು: ಠಾಣೆ ಮೇಲೆ ಕಲ್ಲು ತೂರಾಟ

0

ದಾವಣಗೆರೆ: ಮಟ್ಕಾ ಆಡಿಸಿದ ಆರೋಪದ ಮೇರೆಗೆ ಪೊಲೀಸ್ ವಶದಲ್ಲಿದ್ದ ವ್ಯಕ್ತಿಯೊಬ್ಬ ಚನ್ನಗಿರಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ಸಂಬಂಧಿಕರು ಚನ್ನಗಿರಿ ಪೊಲೀಸ್ ಠಾಣೆಗೆ ನುಗ್ಗಿ ಠಾಣೆಯ ವಾಹನಗಳು, ಠಾಣೆಯ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. ಅಲ್ಲದೆ ಠಾಣೆಯನ್ನು ಧ್ವಂಸ ಮಾಡಿದ್ದಾರೆ. ಜೀಪ್ ಗಳನ್ನು ಹಾನಿಗೊಳಿಸಿದ್ದಾರೆ. ಮಧ್ಯರಾತ್ರಿ 2.30 ರ ತನಕ ಗಲಾಟೆ ಮಾಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸದ್ಯದ ಪರಿಸ್ಥಿತಿ ಶಾಂತವಾಗಿದ್ದು ಚನ್ನಗಿರಿ ಪೊಲೀಸ್ ಠಾಣೆ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಮೃತದೇಹ ದಾವಣಗೆರೆ ಚಿಗಟೇರಿ ಶವಾಗಾರದಲ್ಲಿ ಶನಿವಾರ ನ್ಯಾಯಾಧೀಶರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

Exit mobile version