Home ತಾಜಾ ಸುದ್ದಿ ಪ್ರಜ್ವಲ್ ಪ್ರಕರಣದಿಂದ ಮೈತ್ರಿಗೆ ತೊಡಕಿಲ್ಲ

ಪ್ರಜ್ವಲ್ ಪ್ರಕರಣದಿಂದ ಮೈತ್ರಿಗೆ ತೊಡಕಿಲ್ಲ

0

ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಮೈತ್ರಿ ಅಭ್ಯರ್ಥಿಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವೈಯಕ್ತಿಕವಾಗಿ ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಿ. ವೈಯಕ್ತಿಕವಾಗಿ ಯಾರೇ ತಪ್ಪು ಮಾಡಿದರೂ ಅವರ ಮೇಲೆ ಕ್ರಮವಾಗಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇದೆ. ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಬೇಕು ಅದನ್ನು ಮಾಡಲಿ ಎಂದರು.
ಈ ವಿಷಯದ ಬಗ್ಗೆ ಈಗಾಗಲೇ ಎಸ್‌ಐಟಿ ತಂಡ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ. ತನಿಖೆಯಿಂದ ಸತ್ಯಾಸತ್ಯತೆಗಳು ಹೊರ ಬರುತ್ತವೆ ಎಂದರು.

Exit mobile version