ಪ್ರಜ್ವಲ್ ವಿಚಾರಣೆ ಮುಂದುವರಿಕೆಗೆ ಸೂಚನೆ

0
41

ಬೆಂಗಳೂರು: ಮನೆಯಲ್ಲಿ ಕೆಲಸ ಮಾಡುವ ಮಹಿಳೆಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ವಿಚಾರಣೆಯನ್ನು ವಿಚಾರಣಾಧೀನ ನ್ಯಾಯಾಲಯ ಮುಂದುವರಿಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿತಲ್ಲದೆ ವಿಚಾರಣೆಯನ್ನು ಜು.೪ಕ್ಕೆ ಮುಂದೂಡಿತು.
ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸಂಬಂಧ ದಾಖಲಾಗಿರುವ ಎಫ್‌ಐಆರ್, ಆ ನಂತರ ಸಲ್ಲಿಕೆಯಾಗಿರುವ ಆರೋಪ ಪಟ್ಟಿ ಹಾಗೂ ನ್ಯಾಯಾಂಗ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಜೆಡಿಎಸ್ ಶಾಸಕ ಹಾಗೂ ಪ್ರಜ್ವಲ್ ಅವರ ತಂದೆ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್ ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ, ಈ ಸೂಚನೆ ನೀಡಿದೆ. ಇದೇ ವೇಳೆ ಮತ್ತೊಂದು ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿತು.

Previous articleಆ ದೇವರೇ ಬಂದು ಹೇಳಿದರೂ ನಾನು ಕೇಳಲ್ಲ…
Next article5 ಲಕ್ಷ ಜನರ ಜತೆ ಮೋದಿ ಯೋಗ