Home ತಾಜಾ ಸುದ್ದಿ ಪ್ರತಾಪ್ ರೆಡ್ಡಿ ಕಾಂಗ್ರೆಸ್ ಸೇರ್ಪಡೆ

ಪ್ರತಾಪ್ ರೆಡ್ಡಿ ಕಾಂಗ್ರೆಸ್ ಸೇರ್ಪಡೆ

0


ಬಳ್ಳಾರಿ: ದಿಢೀರ್ ಬೆಳವಣಿಗೆಯಲ್ಲಿ ಜೆಡಿಎಸ್ ಮುಖಂಡ, ಬುಡಾ ಮಾಜಿ ಅಧ್ಯಕ್ಷ ಪ್ರತಾಪ್ ರೆಡ್ಡಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ನಗರದ ನಕ್ಷತ್ರ ಹೋಟೆಲ್ ನಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಕೇಳಿ ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭರತ್ ರೆಡ್ಡಿ ಇತರೆ ಮುಖಂಡರ ಸಮ್ಮುಖದಲ್ಲಿ ಪ್ರತಾಪ್ ರೆಡ್ಡಿ ಕಾಂಗ್ರೆಸ್ ಪಾಳಯ ಸೇರಿಕೊಂಡರು.
ಈ ವೇಳೆ ಮಾತನಾಡಿದ ನಾಸೀರ್ ಹುಸೇನ್, ಬಳ್ಳಾರಿ ಅಭಿವೃದ್ಧಿಯಲ್ಲಿ ಪ್ರತಾಪ್ ರೆಡ್ಡಿ ಅವರ ಸೇವೆ ಸ್ಮರಣೆಗೆ ಅರ್ಹ ಎಂದರು.
ಮುಖಂಡರಾದ ಕಲ್ಲುಕಂಬ ಪಂಪಾಪತಿ, ಪಕ್ಷದ ಜಿಲ್ಲಾಧ್ಯಕ್ಷ ಮೊಹಮದ್ ರಫೀಕ್, ಕೆಪಿಸಿಸಿ ಕಾರ್ಯದರ್ಶಿ ಸತ್ಯಪ್ರಕಾಶ್, ಹುಮಾಯೂನ್ ಖಾನ್ ಸುದ್ದಿಗೋಷ್ಠಿಯಲ್ಲಿ ಇದ್ದರು.

Exit mobile version