Home ತಾಜಾ ಸುದ್ದಿ ‘ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟವರು ನಾವು’

‘ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟವರು ನಾವು’

0

ಬೆಂಗಳೂರು: ‘ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟವರು ನಾವು’ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ. ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಇಂದು ವಿಧಾನಸೌಧ ಬ್ಯಾಂಕ್ವೆಟ್ ಹಾಲ್’ನಲ್ಲಿ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ ನಾಡಪ್ರಭು ಕೆಂಪೇಗೌಡರ 514ನೇ ಜಯಂತೋತ್ಸವ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು.
ಕೆಂಪೇಗೌಡರು ಸಾಮಾಜಿಕವಾಗಿ, ಆರ್ಥಿಕವಾಗಿ ವ್ಯಾಪಾರ ವಹಿವಾಟು ಬಲಪಡಿಸುವ ಮೂಲಕ ಸರ್ವ ಧರ್ಮದವರ ಏಳಿಗೆಗೆ ಶ್ರಮಿಸಿ ಬೆಂಗಳೂರಿನ ಅಭಿವೃದ್ದಿಗೆ ಬುನಾದಿ ಹಾಕಿದ್ದರು. ಮಹನೀಯ ಕೆಂಪೇಗೌಡರು ಸಾಗಿದ ದಾರಿ ನಮ್ಮೆಲ್ಲರಿಗೂ ಮಾದರಿ. ಬೆಂಗಳೂರಿನ ಪ್ರಗತಿಗೆ ನಾವೆಲ್ಲರೂ ಕೈಜೋಡಿಸಬೇಕಿದೆ.
ಬೆಂಗಳೂರಿನ ಅಭಿವೃದ್ಧಿಗೆ ಪ್ರತಿಯೊಬ್ಬರ ಸಲಹೆ ಸೂಚನೆಗಳು ಅಗತ್ಯ. ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟುಕೊಂಡ ಜನ ನಾವು. ಕೆಂಪೇಗೌಡ ಜಯಂತಿ ಕೇವಲ ಬೆಂಗಳೂರಿಗೆ ಸೀಮಿತ ಆಗಬಾರದು. ರಾಜ್ಯಮಟ್ಟದಲ್ಲಿ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡಬೇಕು. ಟೀಕೆ ಮಾಡುವವರು ಮಾಡುತ್ತಾ ಇರಲಿ. ಬಾವುಟ ಕಟ್ಟೋರು ಕಟ್ತಿರಲಿ, ಸೌಂಡ್ ಮಾಡೋರು ಮಾಡುತ್ತಿರಲಿ. ಧರಣಿ ಕೂರುತ್ತೇನೆ ಅನ್ನೋ ನಾಯಕರು ಧರಣಿ ಕೂರಲಿ. ನಾನು ಮಾತ್ರ ನಿಲ್ಲೋನಲ್ಲ, ಮುಂದಕ್ಕೆ ಹೋಗ್ತಾ ಇರುತ್ತೇನೆ, ರಾಜಧಾನಿ ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು, ಬೆಟರ್ ಬೆಂಗಳೂರು, ಗ್ಲೋಬಲ್ ಬೆಂಗಳೂರು ಮಾಡಲು ನಿಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಿ. ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಬೆಂಗಳೂರು ಗ್ಲೋಬಲ್ ಬೆಂಗಳೂರು ಆಗಿ ಮಾಡೋಣ ಎಂದರು.

Exit mobile version