ಪ್ರಧಾನಿ ಮೋದಿ ಪದವಿ ವಿವರ ಕೇಳಿದ್ದ ಕೇಜ್ರಿವಾಲ್‌ಗೆ 25 ಸಾವಿರ ರೂ. ದಂಡ..!

0
104
kejriwal

ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ವಿವರಗಳನ್ನು ಕೇಳಿದ್ದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ನ್ಯಾಯಾಲಯ 25 ಸಾವಿರ ರೂ. ದಂಡ ವಿಧಿಸಿದೆ.
ಆರ್‌ಟಿಐನಡಿ ಮಾಹಿತಿ ಕೇಳಿದ್ದ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಪ್ರಧಾನಿ ಮೋದಿ ಅವರ ಪದವಿ ವಿವರಗಳನ್ನು ಒದಗಿಸುವಂತೆ ಪ್ರಧಾನಿ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿ, ವಿಶ್ವವಿದ್ಯಾಲಯಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಆಯೋಗದ ಮುಖ್ಯಸ್ಥರು ಆದೇಶಿಸಿದ್ದರು. ಆದರೆ ಗುಜರಾತ್‌ನ ನ್ಯಾಯಮೂರ್ತಿ ಬಿರೇನ್‌ ವೈಷ್ಣವ್‌ ಅವರ ಪೀಠ ಆದೇಶವನ್ನು ರದ್ದು ಮಾಡಿದೆ.
ಪ್ರಧಾನಿ ಮೋದಿ ಪದವಿ ಪ್ರಮಾಣ ಪತ್ರ ಪಡೆಯಲು ಆರ್‌ಟಿಐ ಕಾಯ್ದೆ ಅನ್ವಯ ಮಾಡಲು ಆಗಲ್ಲ. ಇನ್ನೊಬ್ಬರ ವೈಯಕ್ತಿಕ ವಿಷಯಗಳನ್ನೆಲ್ಲ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳುವಂತಿಲ್ಲ ಎಂದು ಗುಜರಾತ್‌ ವಿವಿ ಪರ ತುಷಾರ್‌ ಮೆಹ್ತಾ ವಾದ ಮಂಡಿಸಿದ್ದರು.

Previous articleಬ್ಯಾಟರಿ ಬ್ಲಾಸ್ಟ್: ಬೆಂಕಿ
Next articleಒಳ ಮೀಸಲಾತಿ ವಿರೋಧಿಸಿ ಚುನಾವಣೆ ಬಹಿಷ್ಕಾರ