ಪ್ರಶಸ್ತಿ ಹಿಂದುರಿಗಿಸುವದಾಗಿ ಪ್ರಧಾನಿಗೆ ಪತ್ರ ಬರೆದ ವಿನೇಶ್ ಫೋಗಟ್‌

0
28

ನವದೆಹಲಿ: ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟಿಸಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಮತ್ತು ಅರ್ಜುನ್ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ವಿನೇಶ್ ಫೋಗಟ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು “ನನ್ನ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಮತ್ತು ಅರ್ಜುನ್ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ” ಎಂದು ಫೋಗಟ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. “ನನ್ನನ್ನು ಈ ಪರಿಸ್ಥಿತಿಗೆ ತಂದ ಸರ್ವಶಕ್ತನಿಗೆ ತುಂಬಾ ಧನ್ಯವಾದಗಳು” ಎಂದು ಬರೆದ ಪತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

Previous articleಪಾಟೀಲ್ ಹೇಳಿಕೆ ಖಂಡಿಸಿ ರೈತರಿಂದ ಹೆದ್ದಾರಿ‌ ತಡೆ
Next articleಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ನಜ್ಮಾ ಜಝೀರು ದೂರು