SK Home Ad
Home ನಮ್ಮ ಜಿಲ್ಲೆ ಗದಗ ಪ್ರಿಯಾಂಕಾ ಗಾಂಧಿ ದಿಢೀರ್ ದೆಹಲಿಗೆ

ಪ್ರಿಯಾಂಕಾ ಗಾಂಧಿ ದಿಢೀರ್ ದೆಹಲಿಗೆ

0
102

ಗದಗ: ಗದಗ ನಗರದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದ್ದೇವರಮಠ ಪರ ಶನಿವಾರ ಸಂಜೆ ಪ್ರಚಾರ ನಡೆಸಬೇಕಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜಿಲ್ಲಾಧಿಕಾರಿಗಳ ಕಚೇರಿ ಹೆಲಿಪ್ಯಾಡ್‌ನಿಂದ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಯಬರೇಲಿಯಿಂದ ನಾಮಪತ್ರ ಸಲ್ಲಿಸುವ ಸಮಾರಂಭದಲ್ಲಿ ಪಾಲ್ಗೊಳ್ಳಲು ತುರ್ತಾಗಿ ಹುಬ್ಬಳ್ಳಿಯಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದರು. ಇದರಿಂದಾಗಿ ಪ್ರಿಯಾಂಕಾ ಗಾಂಧಿ ಭಾಷಣ ಆಲಿಸಲು ಆಗಮಿಸಿದ್ದ ಸಹಸ್ರಾರು ಜನರಿಗೆ ತೀವ್ರ ನಿರಾಸೆಯಾಯಿತು.
ಸಂಜೆ ೬:೨೦ಕ್ಕೆ ದಾವಣಗೆರೆಯಿಂದ ಹೆಲಿಕಾಪ್ಟರ್‌ನಲ್ಲಿ ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಹೆಲಿಪ್ಯಾಡ್‌ಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ, ಸಚಿವ ಡಾ.ಎಚ್.ಕೆ.ಪಾಟೀಲ, ಶಾಸಕ ಜಿ.ಎಸ್.ಪಾಟೀಲ, ಮಾಜಿ ಶಾಸಕ ಡಿ.ಆರ್.ಪಾಟೀಲ ಸ್ವಾಗತಿಸಿದರು. ನಂತರ ರಸ್ತೆ ಮೂಲಕ ಹುಬ್ಬಳ್ಳಿಗೆ ತೆರಳಿ ದೆಹಲಿಗೆ ವಿಶೇಷ ವಿಮಾನದಲ್ಲಿ ಪ್ರಯಾಣಿಸಿದರು.