ಪ್ರಿಯಾಂಕಾ ಗಾಂಧಿ ಭರ್ಜರಿ ಮುನ್ನಡೆ

0
34

ವಯನಾಡ್‌: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಚೊಚ್ಚಲ ಸ್ಪರ್ಧೆಯಲ್ಲಿ ಅವರು 1.75 ಲಕ್ಷ ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಈ ಕ್ಷೇತ್ರದಿಂದ 3.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ್ದರು. ಆದರೆ ರಾಯಬರೇಲಿ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಅವರು, ಅಂತಿಮವಾಗಿ ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧರಿಸಿ ರಾಜೀನಾಮೆ ನೀಡಿದ್ದರು. ಈಗ ವಯನಾಡ್‌ನಲ್ಲಿ ಪ್ರಿಯಾಂಕಾ ಗಾಂಧಿ ಅವರು ಭರ್ಜರಿ ಮುನ್ನಡೆ ಕಾಪಾಡಿಕೊಂಡಿದ್ದಾರೆ.

Previous articleಕರ್ನಾಟಕದಲ್ಲಿ ‘ಕೈ’ ಮನ್ನಡೆ
Next articleಕಾಂಗ್ರೆಸ್ ಪಕ್ಷ, ಸರ್ಕಾರದ ಹಣ, ಅಧಿಕಾರ ಪ್ರಭಾವ 9 ಸುತ್ತು ಎಣಿಕೆಯಲ್ಲಿ ಬಹಿರಂಗ