ಪ್ರೇಮಿಗಳು ಪರಾರಿ: ಯುವಕನ ತಾಯಿಗೆ ಕಂಬಕ್ಕೆ ಕಟ್ಟಿ ಥಳಿತ

0
15

ಬೆಳಗಾವಿ: ಯುವತಿಯ ಮನೆಯವರು ನಿಶ್ಚಿತಾರ್ಥ ಮಾಡಲು ಸಿದ್ಧತೆ ಮಾಡಿಕೊಳ್ಳುವ ಹೊತ್ತಿನಲ್ಲಿ ಪ್ರೀತಿಸಿದ ಯುವಕನೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಯುವತಿಯ ಮನೆಯವರು 42ವರ್ಷದ ಯುವಕನ ತಾಯಿಯನ್ನು ತಡರಾತ್ರಿ ಕಂಬಕ್ಕೆ ಕಟ್ಟಿಹಾಕಿ ಬೆತ್ತಲೆಗೊಳಿಸಿ ಥಳಿಸಿದ ಅಮಾನವೀಯ ಸೋಮವಾರ ಘಟನೆ ನಡೆದಿದೆ.
ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಹೀನ ಕೃತ್ಯ ನಡೆದಿದ್ದು, ಪ್ರೀತಿಸಿದ ಜೋಡಿ ಮನೆ ಬಿಟ್ಟು ಹೋಗಿದ್ದ ರಿಂದ ಯುವಕನ ತಾಯಿಗೆ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ.
ಯುವಕನ ತಾಯಿಗೆ ಯುವತಿಯ ಕುಟುಂವಸ್ಥರು ಕಂಬಕ್ಕೆ ಕಟ್ಟಿ ಹಾಕಿ ಬೆತ್ತಲೆ ಮಾಡಿ ಹಲ್ಲೆ ಮಾಡಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಒಂದೇ ಗ್ರಾಮದವರಾದ ಯುವಕ, ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಭಾನುವಾರ ರಾತ್ರಿ ಮನೆ ಬಿಟ್ಟು ಓಡಿ ಹೋಗಿದ್ದಾರೆ. ಆದರೆ ಇಂದು ಯುವತಿತ ನಿಶ್ಚಿತಾರ್ಥ, ಮದುವೆ ನಿಗದಿ ಮಾಡಲು ಯುವತಿಯ ಕುಟುಂಬಸ್ಥರು ಸಿದ್ಧತೆ ಮಾಡಿಕೊಂಡಿದ್ದರು. ಏಕಾಏಕಿ ರೊಚ್ಚಿಗೆದ್ದ ಯುವತಿ ಕುಟುಂಬಸ್ಥರಿಂದ ಯುವಕನ ಮನೆ ಮೇಲೆ ಭಾನುವಾರ ದಾಳಿ‌ ನಡೆಸಿ ರಾತ್ರೋರಾತ್ರಿ ಮನೆಯನ್ನು ಸಂಪೂರ್ಣ ದ್ವಂಸ ಗೊಳಿಸಿ ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಬಳಿಕ ಗ್ರಾಮದಲ್ಲಿನ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ಮಾಡಿದ್ದಾರೆ.
ತಡರಾತ್ರಿ ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ, ಪರಿಶೀಲನೆ. ಪ್ರಕರಣ ಸಂಬಂಧ 7 ಜನ ಆರೋಪಿಗಳನ್ನು ವಿಚಾರಣೆ ನಡೆಸಿದ್ದು, ಓಡಿ ಹೋಗಿರುವ ಯುವಕ, ಯುವತಿ ಬೆನ್ನು ಬಿದ್ದ ಪೊಲೀಸರು. ಗ್ರಾಮದಲ್ಲಿ 2 ಕೆ ಎಸ್ ಆರ್ ಪಿ ಪೊಲೀಸ್ ಬಂದೋಬಸ್ತ ನಿಯೋಜನೆ ಮಾಡಲಾಗಿದೆ.

Previous articleವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ
Next articleಹಿಂದಿ ಬೆಲ್ಟ್‌ನಲ್ಲಿ ಹಿಂದುತ್ವದ ಅಲೆ