Home ತಾಜಾ ಸುದ್ದಿ ಫ್ಲೆಕ್ಸ್ ಹರಿಯುವ ಅವಶ್ಯಕತೆ ಬಿಜೆಪಿಗೆ ಇಲ್ಲ: ಬೊಮ್ಮಾಯಿ

ಫ್ಲೆಕ್ಸ್ ಹರಿಯುವ ಅವಶ್ಯಕತೆ ಬಿಜೆಪಿಗೆ ಇಲ್ಲ: ಬೊಮ್ಮಾಯಿ

0
ಬೊಮ್ಮಾಯಿ

ಯಾರು ಭಾರತ್ ಜೋಡೋ ಮಾಡಿದ್ದಾರೆ, ಯಾರು ತೋಡೋ ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ್ ಜೋಡೋ ಫ್ಲೆಕ್ಸ್‌ಗಳನ್ನು ಹರಿದು ಹಾಕಿರುವ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಡಿ.ಕೆ. ಶಿವಕುಮಾರ್ ಏನಾದರೂ ಹೇಳಲಿ. ಯಾರೇ ಫ್ಲೆಕ್ಸ್ ಹಾಕಬೇಕಾದರೂ ಅನುಮತಿ ಪಡೆಯಬೇಕು. ಯಾವುದೇ ರಾಜಕೀಯ ಪಕ್ಷದ ಫ್ಲೆಕ್ಸ್ ಹರಿಯುವ ಅವಶ್ಯಕತೆ ಬಿಜೆಪಿಗೆ ಇಲ್ಲ. ಎಲ್ಲ ಜನರಿಗೂ ಎಲ್ಲಾ ವಿಚಾರಗಳು ಗೊತ್ತಿದೆ ಎಂದರು.

Exit mobile version