ಬಂಡೆ ಹಾಡು ಬಂತು…’ಶೇರ್’ ಮಾಡಿ, ಲೈಕ್ ಒತ್ತಿ..!

0
42

‘ಬಂಡೆ ಸಾಹೇಬ್’ ಕಾ ಶೇರ್ ಆಯಾ…..

ಬೆಂಗಳೂರು: ಹುತಾತ್ಮ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಕುರಿತಾದ ಬಂಡೆ ಸಾಹೇಬ್ ಚಿತ್ರದ ಶೇರ್ ಆಯಾ….. ಎಂಬ ಲಿರಿಕ್ಸ್ ಗೀತೆ ಅನಾವರಣಗೊಂಡಿದೆ
‘ಬಂಡೆ ಸಾಹೇಬ್’ ಚಿತ್ರದ ಟೀಸರ್‌ನ್ನು ಇತ್ತೀಚೆಗೆ ನಟ ಶರಣ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಕೆಲ ವರ್ಷಗಳ ಹಿಂದೆ ಕಲಬುರಗಿಯಲ್ಲಿ ಶೂಟೌಟ್‌ಗೆ ಬಲಿಯಾದ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಅವರ ಜೀವನಾಧಾರಿತ ಈ ಚಿತ್ರಕ್ಕೆ “ಬಂಡೆ ಸಾಹೇಬ್” ಎಂದು ಹೆಸರಿಡಲಾಗಿದ್ದು, ಮಲ್ಲಿಗೆ ಸಿನಿ ಕಂಬೈನ್ಸ್ ಲಾಂಛನದಲ್ಲಿ ಗೋಪಣ್ಣ ದೊಡ್ಮನಿ, ಕಮಲ ದೊಡ್ಮನಿ ಹಾಗೂ ಮಾಲ ವಿ ಕೊರಳ್ಳಿ ಅವರು ನಿರ್ಮಿಸಿರುವ ಈ ಚಿತ್ರವನ್ನು ಚಿನ್ಮಯ್ ರಾಮ್ ನಿರ್ದೇಶಿಸಿದ್ದಾರೆ. ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ವೀರಣ್ಣ ಕೊರಳ್ಳಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಮುಂಜಾನೆ ಮಂಜು ಛಾಯಾಗ್ರಹಣ ಹಾಗೂ ಚಂದ್ರು ಬಂಡೆ ಅವರ ಸಾಹಸ ನಿರ್ದೇಶನವಿದೆ, ಚಿತ್ರದ ನಾಯಕನಾಗಿ ಸಂತೋಷ್ ರಾಮ್, ನಾಯಕಿಯಾಗಿ ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕಾವ್ಯ ಭಾರದ್ವಾಜ್ ಹಾಗೂ. ವೀರಣ್ಣ ಕೊರಳ್ಳಿ, ಬಿರಾದಾರ್,‌ ಸಿಂಬಾ ಮುಂತಾದವರು ತಾರಾಬಳಗದಲ್ಲಿದ್ದಾರೆ. ಚಿತ್ರದಲ್ಲಿ ಎಂ.ಎಸ್ ತ್ಯಾಗರಾಜ್ ಸಂಗೀತ ನೀಡಿರುವ ನಾಲ್ಕು ಹಾಡುಗಳಿವೆ ಇನ್ನು ಶೇರ್ ಆಯಾ… ಗೀತೆಗೆ ಮನೋಜ್‌ ಸಾಹಿತ್ಯವಿದ್ದು ಯುವ ಗಾಯಕ ಲಿಖಿತ್ ಗಾಯಕ್ ಅವರ ಗಾಯನದಲ್ಲಿ ಮೂಡಿ ಬಂದಿದೆ…

Previous articleಹುಬ್ಬಳ್ಳಿಯ ಕೆಲವು ಪ್ರದೇಶಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯ
Next articleಆಟೋ ಚಾಲಕ ನಿಗೂಢ ಸಾವು ಪ್ರಕರಣ – ಕೊಲೆ ಕೃತ್ಯ