ಬಜೆಟ್‌: ಮಠ-ಮಂದಿರಗಳಿಗೆ ಭರ್ಜರಿ ಕೊಡುಗೆ

0
60
ದೇವಸ್ಥಾನ

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಠ-ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ.
ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ 475 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ರೂ. ಕೋಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಘೋಷಣೆ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಮ್ಯೂಸಿಯಂ, ಕಲಾ ಗ್ಯಾಲರಿ ನಿರ್ಮಾಣಮಾಡಲಾಗುವುದು. ಹಂಪಿಯ ವಿಜಯ ವಿಠ್ಠಲ ದೇವಾಲಯ, ಪುರಂದರ ಮಂಟಪ, ಚಿಕ್ಕಬಳ್ಳಾಪುರದ ಭೋಗ ನಂದೀಶ್ವರ ದೇವಾಲಯಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

Previous articleರಾಜ್ಯ ಬಜೆಟ್: ಪ್ರವಾಸೋದ್ಯಮಕ್ಕೆ ಭರ್ಜರಿ ಕೊಡುಗೆ
Next articleಮಹಿಳೆಯರಿಗೆ ಉಚಿತ ಬಸ್ ಪಾಸ್