ಬಳ್ಳಾರಿಯಲ್ಲಿ ಮತ್ತೊಬ್ಬ ಬಾಣಂತಿ ಸಾವು

0
30

ಬಳ್ಳಾರಿ: ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ೨೮ ದಿನಗಳಾಗಿದ್ದ ಬಾಣಂತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ರೇಷ್ಮಾಬಿ(೨೫) ಮೃತಪಟ್ಟ ಬಾಣಂತಿ. ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ ಎಂದು ಬಿಮ್ಸ್ ವೈದ್ಯರು ತಿಳಿಸಿದ್ದಾರೆ.
ರೇಷ್ಮಾಬಿ ಜ. ೪ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜ. ೬ರಂದು ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಜ. ೧೪ರಂದು ಮತ್ತೆ ಬಿಮ್ಸ್ ಆಸ್ಪತ್ರೆಗೆ ರೇಷ್ಮಾ ಅವರನ್ನು ದಾಖಲಿಸಲಾಗಿತ್ತು. ಸತತ ೨೧ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಣಂತಿ ರೇಷ್ಮಾ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದಾರೆ.

Previous articleಪಕ್ಷ ಗಂಗೆಯಷ್ಟೇ ಪವಿತ್ರವಾಗಬೇಕು
Next articleಸಸಿಹಿತ್ಲು ಕಡಲ ಕಿನಾರೆಯಲ್ಲಿ ಮೊಟ್ಟೆ ಇಟ್ಟ ಆಮೆಗಳು