Home ತಾಜಾ ಸುದ್ದಿ ಬಸವಕಲ್ಯಾಣದ ಅನುಭವ ಮಂಟಪದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ

ಬಸವಕಲ್ಯಾಣದ ಅನುಭವ ಮಂಟಪದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ

0

ಬಸವಕಲ್ಯಾಣ(ಬೀದರ್ ಜಿಲ್ಲೆ ) : ಹನ್ನೆರಡನೇ ಶತಮಾನದಲ್ಲಿ ಜಗತ್ತಿಗೆ ಮೊಟ್ಟ ಮೊದಲ ಬಾರಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ ಕೊಟ್ಟ, ಸಮಾನತೆ ಸಂದೇಶ ಸಾರಿದ ಬಸವಾದಿ ಶರಣರ ಕರ್ಮಭೂಮಿ ಬಸವಕಲ್ಯಾಣದ ಅನುಭವ ಮಂಟಪದಿಂದ ಭಾನುವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ನೀಡಲಾಯಿತು.

ಅನುಭವ ಮಂಟಪದಿಂದ ಚಾಮರಾಜನಗರದ ವರೆಗೆ ಮಾನವ ಸರಪಳಿ ನಿರ್ಮಿಸಿ, ಸ್ವಾತಂತ್ರ್ಯ, ಸಮಾನತೆ ಮತ್ತು ಭಾತೃತ್ವ, ಒಗ್ಗಟ್ಟಿನ ಮಂತ್ರ ಜಪಿಸಲಾಯಿತು. ಸಂವಿಧಾನದ ಪೀಠಿಕೆ ಓದುವುದರ ಮೂಲಕ ಅದರ ಬಗೆಗಿನ ಬದ್ಧತೆ ಪ್ರದರ್ಶಿಸಿದರು. ಮಾನವ ಸರಪಳಿಯುದ್ದಕ್ಕೂ ವಿವಿಧ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು, ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಕಾರ್ಯಕರ್ತರು ತ್ರಿವರ್ಣ ಧ್ವಜ ಹಿಡಿದು ಘೋಷಣೆ ಕೂಗಿದರು. ಕೆಲವು ಮಕ್ಕಳು ತಾಯಿ ಭುವನೇಶ್ವರಿ ಹಾಗೂ ಭಾರತಾಂಬೆಯ ವೇಷ ಧರಿಸಿ ಗಮನ ಸೆಳೆದರು.

Exit mobile version