Home Advertisement
Home ತಾಜಾ ಸುದ್ದಿ ಬಸವರಾಜ ಬೊಮ್ಮಾಯಿ ರಾಜಿನಾಮೆ

ಬಸವರಾಜ ಬೊಮ್ಮಾಯಿ ರಾಜಿನಾಮೆ

0
131

ಹಾವೇರಿ: ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನೂತನ ಸಂಸದ ಬಸವರಾಜ ಬೊಮ್ಮಾಯಿಯವರು ಶನಿವಾರ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದರು.
ಬೆಂಗಳೂರಿನ ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ರಾಜಿನಾಮೆ ಸಲ್ಲಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಸತ್ತಿನಲ್ಲಿ ಕರ್ನಾಟಕದ ನೀರಾವರಿ ಯೋಜನೆಗಳಾದ ಕೃಷ್ಣಾ, ಕಾವೇರಿ ಅಂತರಾಜ್ಯ ಜಲ ವಿವಾದಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇನೆ. ಸಂಸತ್ತಿನಲ್ಲಿ ಪ್ರಮಾಣಿಕವಾಗಿ ಕನ್ನಡಿಗರ ಪರವಾಗಿ ಧ್ವನಿ ಎತ್ತುವೆ. ನಾನು ಸಂಸದನಾಗಿ ಆಯ್ಕೆಯಾಗಿ ದೆಹಲಿಗೆ ಹೋದರೂ, ಕರ್ನಾಟಕದ ರಾಜಕಾರಣದಲ್ಲಿ ನಾನು ಸಕ್ರಿಯನಾಗಿರುತ್ತೇನೆ. ನಮ್ಮ ವರಿಷ್ಠರು ಅದೇ ಕಾರಣಕ್ಕೆ ಕೆಲವು ನಿರ್ಣಯ ತೆಗೆದುಕೊಂಡಿದ್ದಾರೆ ಎಂದರು.