ಚಿಕ್ಕಮಗಳೂರು: ಬಾಳೆಹೊನ್ನೂರಿನ ರಂಭಾಪುರಿ ಮಠದ ಜಗದ್ಗುರು ವೀರಸೋಮೇಶ್ವರ ಶ್ರೀ ತಮ್ಮ ಹಕ್ಕು ಚಲಾಯಿಸಿ, ಪ್ರತಿಯೊಬ್ಬರೂ ಮತದಾನ ಮಾಡುವಂತೆ ಸಂದೇಶ ನೀಡಿದರು.
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಮಠದ ಆವರಣದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 209ರಲ್ಲಿ ಶ್ರೀಗಳು ಮತದಾನ ಮಾಡಿದರು.
ಬಾಳೆಹೊನ್ನೂರಿನ ಮತಗಟ್ಟೆಯಲ್ಲಿ ಶ್ರೀಗಳ ಮತದಾನ ಬಳಿಕ ಉಳಿದವರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಮೊದಲಿನಿಂದಲೂ ಅನುಸರಿಸಿಕೊಂಡು ಬಂದ ಪದ್ಧತಿಯಾಗಿದೆ.