Home ತಾಜಾ ಸುದ್ದಿ ಬಿಜೆಪಿಗರದ್ದು ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು!!

ಬಿಜೆಪಿಗರದ್ದು ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು!!

0

ಬಿಜೆಪಿಗರು ಶುದ್ಧ 40% ಪ್ರೇಮಿಗಳು, 40% ಕಮಿಷನ್ ಮೇಲಿನ ಅವರ ಪ್ರೀತಿ ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು ಎಂದು ಕಾಂಗ್ರಸ್‌ ಬಿಜೆಪಿಗರನ್ನು ಲೇವಡಿ ಮಾಡಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಗರ ಚಿತ್ರವನ್ನು ವ್ಯಂಗ್ಯವಾಗಿ ಬರೆದು ಪ್ರೇಮಿಗಳ ದಿನದ ಶುಭಾಶಯ ತಿಳಿಸುವ ಮೂಲಕ ಬಿಜೆಪಿಯ ಕಾಲೆಳೆದಿದೆ. ಪ್ರಿಯಕರನ ಕನಸು, ಮನಸಲ್ಲೂ ಪ್ರಿಯತಮೆ ಕಾಣುವಂತೆ, ಬಿಜೆಪಿಗರ ಕನಸು ಮನಸ್ಸಿನಲ್ಲೂ 40 ಪರ್ಸೆಂಟಿನದ್ದೇ ಧ್ಯಾನ…. ಎಂದು ಕಾಂಗ್ರೆಸ್‌ ಬರೆದಿದೆ.
ಒಮ್ಮೆ ತಿರಸ್ಕಾರ ಭಾವ ಮೂಡಿದರೆ ಮತ್ತೆಂದೂ ಅಲ್ಲಿ ಪ್ರೀತಿಗೆ ಜಾಗವಿಲ್ಲ! ಮಂಡ್ಯದಲ್ಲಿ ತಿರಸ್ಕಾರದ ಪ್ರೇಮವೈಫಲ್ಯ ಅನುಭವಿಸಿ ನೋವಿನಲ್ಲಿರುವ ಭಗ್ನಪ್ರೇಮಿಗೆ ನಮ್ಮ ಸಾಂತ್ವಾನಗಳು!
“ಪ್ರೀತಿ ಮಧುರ, ತ್ಯಾಗ ಅಮರ” ಕುರ್ಚಿಯೊಂದಿಗಿನ ಪ್ರೇಮದ ಸವಿಗಳಿಗೆಯ ನೆನಪು, ವಿರಹದ ನೋವು ಸದಾ ಕಾಡುತ್ತಿರುತ್ತದೆ.. ಈಶ್ವರಪ್ಪನವರೇ ತಮಗೆ ವಿರಹದ ನೋವು ಭರಿಸುವ ಶಕ್ತಿ ಸಿಗಲಿ!! ಎಂದು ಕಾಂಗ್ರೆಸ್‌ ಟೀಕಿಸಿದೆ.

Exit mobile version