ಬಿಜೆಪಿಗೆ ಈ ಬಾರಿ ನಿರೀಕ್ಷೆಗೂ ಮೀರಿದ ಗೆಲುವು

0
11
ಬಿ.ಎಲ್‌. ಸಂತೋಷ್

ಮಂಗಳೂರು(ಕಾವೂರು): “ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ನಿರೀಕ್ಷೆಗಿಂತ ಹೆಚ್ವಿನ ಗೆಲುವು ಸಾಧಿಸಲಿದೆ ಕಾದು ನೋಡಿ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೇಳಿದ್ದಾರೆ.
ಕಾವೂರಿನಲ್ಲಿ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಚುನಾವಣಾ ಕಚೇರಿಗೆ ಭೇಟಿ ನೀಡಿದಾಗ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾದರು. ಹಾಲಿ ಶಾಸಕ ಉತ್ತರ ಕ್ಷೇತ್ರದ ಅಭ್ಯರ್ಥಿ ಡಾ.ಭರತ್ ಶೆಟ್ಟಿ ಅವರ ಜತೆ ಮಾತುಕತೆ ನಡೆಸಿದರಲ್ಲದೆ ಪಕ್ಷದ ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ತರನ್ನು ಹುರಿದುಂಬಿಸಿದರು.
ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಸಹಿತ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Previous articleಬಿಜೆಪಿಗೆ ಧಕ್ಕೆಯಾಗುತ್ತಿರುವುದು ನಿಜ
Next articleಸ್ವ ಹಿತಾಸಕ್ತಿಗಾಗಿ ನನ್ನ ವಿರುದ್ಧ ಕೆಲವರಿಂದ ಷಡ್ಯಂತ್ರ