ಬಿಜೆಪಿಗೆ ಸ್ಪಷ್ಟ ಬಹುಮತ: ಶೆಟ್ಟರ

0
13
ಶೆಟ್ಟರ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಪ್ರವಾಸದಿಂದ ರಾಜ್ಯದಲ್ಲಿ ಬಿಜೆಪಿಗೆ ಪೂರಕ ವಾತಾವರಣ ನಿರ್ಮಾಣವಾಗಿದ್ದು, ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅಭಿಪ್ರಾಯ ಪಟ್ಟಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೇ ತಿಂಗಳ ಮೊದಲ ವಾರದಲ್ಲಿ ಚುನಾವಣೆ ಘೋಷಣೆಯಾಗುವ ನಿರೀಕ್ಷೆ ಇತ್ತು. ಆದರೆ, ಕೇಂದ್ರ ಚುನಾವಣಾ ಆಯೋಗ ಬುಧವಾರವೇ ಚುನಾವಣೆಗೆ ಹಸಿರು ನಿಷಾನೆ ತೋರಿದೆ. ಈ ನಿಟ್ಟಿನಲ್ಲಿ ಬಿಜೆಪಿ ಚುನಾವಣೆಗೆ ಅಣಿಯಾಗಿದೆ ಎಂದರು. ಬಿಜೆಪಿ ಅಭ್ಯರ್ಥಿಗಳ ಪಟ್ಟಿಯ ಬಗ್ಗೆ ಇನ್ನು ಗಂಭೀರವಾಗಿ ಚರ್ಚೆಗಳು ನಡೆಯುತ್ತವೆ. ಯಾರ ನಾಯಕತ್ವದಲ್ಲಿ ಚುನಾವಣೆ ಎದುರಿದೋದು ಎನ್ನುವುದರ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡತ್ತೆದೆ. ನಾನು ೬ ಬಾರಿ ಗೆದ್ದೀದ್ದೇನೆ. ಮತ್ತೊಮ್ಮೆ ಜನ ಕೈ ಹಿಡಿಯುತ್ತಾರೆ ಎನ್ನುವ ಭರವಸೆ ಇದೆ ಎಂದು ಶೆಟ್ಟರ ಹೇಳಿದರು.
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಕೇವಲ ೬೦ ರಿಂದ ೭೦ ಸ್ಥಾನಕ್ಕೆ ಸೀಮಿತಗೊಳ್ಳುತ್ತದೆ ಎಂಬ ಡಿ.ಕೆ. ಶಿವಕುಮಾರ ಹೇಳಿಕೆಗೆ ತಿರುಗೇಟು ನೀಟಿದ ಶೆಟ್ಟರ್, ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರು ಅಧಿಕಾರದ ಚುಕ್ಕಾಣಿ ಹಿಡಿಯೋದಿಲ್ಲ ಎಂದು ಭವಿಷ್ಯ ನುಡುದರು.

Previous articleಬಿಜೆಪಿ ಶಾಸಕರನ್ನ ಸಂಪರ್ಕಿಸುತ್ತಿರುವ ಡಿಕೆಶಿ
Next articleಬಿಜೆಪಿ ಸಂಸದ ಗಿರೀಶ್ ಬಾಪಟ್‌ ಇನ್ನಿಲ್ಲ