ಬಿಜೆಪಿಯಿಂದ ಅಂತರ ಕಾಯ್ದುಕೊಂಡ ಶೆಟ್ಟರ

0
19

ಹುಬ್ಬಳ್ಳಿ: ಹೆಬಸೂರು ಭವನದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಗೈರಾಗುವ ಮೂಲಕ ಮಾಜಿ ಮುಖ್ಯಮಂತ್ರಿ‌ ಜಗದೀಶ ಶೆಟ್ಟರ ಅಂತರ ಕಾಯ್ದುಕೊಂಡಿದ್ದಾರೆ.
ಜಗದೀಶ ಶೆಟ್ಟರ ಇತ್ತೀಚೆಗೆ ಬಿಜೆಪಿ ಪಕ್ಷ ಸೇರಿದ್ದರೂ ಸ್ಥಳೀಯ ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸದೇ ಅಂತರ ಕಾಯ್ದುಕೊಳ್ಳುತ್ತಿದ್ದಾರೆ.

ಶೆಟ್ಟರ ಬಣದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಶಾಸಕ ಶಂಕರಪಾಟೀಲ ಮುನೇನಕೊಪ್ಪ ಕೂಡ ಗೈರಾಗಿದ್ದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಮಹೇಶ್ ಟೆಂಗಿನಕಾಯಿ, ಅರವಿಂದ ಬೆಲ್ಲದ ಹಾಗೂ ಮಾಜಿ ಶಾಸಕ ಅನಿಲ್ ಬೆನಕೆ ಸೇರಿದಂತೆ ಜೋಶಿ ಬಣ ಸಭೆಗೆ ಹಾಜರಾಗಿತ್ತು.

Previous articleನಾನಿನ್ನೂ ಜೀವಂತವಾಗಿದ್ದೇನೆ ಎಂದ ಪೂನಂ ಪಾಂಡೆ
Next articleಅಡ್ವಾಣಿಗೆ ಭಾರತ ರತ್ನ: ಮೋದಿಗೆ ಅಭಿನಂದನೆ ಸಲ್ಲಿಸಿದ ಶೆಟ್ಟರ್