Home ತಾಜಾ ಸುದ್ದಿ ಬಿಜೆಪಿ ಅಧಿಕಾರಕ್ಕೆ ತರಲು ವಿಜಯೇಂದ್ರ ಜೊತೆ ಪ್ರವಾಸ

ಬಿಜೆಪಿ ಅಧಿಕಾರಕ್ಕೆ ತರಲು ವಿಜಯೇಂದ್ರ ಜೊತೆ ಪ್ರವಾಸ

0

ಮಂಗಳೂರು: ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಬಿ.ಎಸ್‌. ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಮತ್ತು ವಿಜಯೇಂದ್ರ ಜೊತೆಯಾಗಿಯೇ ಪಕ್ಷವನ್ನು ಮರಳಿ ರಾಜ್ಯದಲ್ಲಿ ಅಧಿಕಾರಕ್ಕೆ ತರುವಲ್ಲಿ ಶ್ರಮಿಸುತ್ತೇವೆ ಎಂದು ನಿರ್ಗಮನ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಜಯೇಂದ್ರ ಅವರು ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನಮ್ಮ ಜತೆ ಪ್ರವಾಸ ಮಾಡುತ್ತಿದ್ದವರು. ಯುವ ಮೋರ್ಚಾ ರಾಜ್ಯಾಧ್ಯಕ್ಷರಾಗಿಯೂ ಓಡಾಟ ನಡೆಸಿದ ಅನುಭವಿ. ಅವರು ಉತ್ತಮ ರೀತಿಯಲ್ಲಿ ಪಕ್ಷ ಸಂಘಟಿಸಿ ಬಿಜೆಪಿಯನ್ನು ರಾಜ್ಯದಲ್ಲಿ ಮರಳಿ ಅಧಿಕಾರಕ್ಕೆ ತರುವಲ್ಲಿ ಶ್ರಮಿಸುತ್ತಾರೆ. ನಾನೂ ಅವರ ಜತೆಯಲ್ಲಿ ರಾಜ್ಯ ಓಡಾಟ ನಡೆಸುತ್ತೇನೆ ಎಂದಿದ್ದಾರೆ.

Exit mobile version