Home ತಾಜಾ ಸುದ್ದಿ ಬಿಜೆಪಿ-ಆರ್‌ಎಸ್‌ಎಸ್‌ ಅಧಿಕಾರಕ್ಕಾಗಿ ದೇಶವನ್ನೇ ಸುಡುತ್ತಾರೆ

ಬಿಜೆಪಿ-ಆರ್‌ಎಸ್‌ಎಸ್‌ ಅಧಿಕಾರಕ್ಕಾಗಿ ದೇಶವನ್ನೇ ಸುಡುತ್ತಾರೆ

0

ದೆಹಲಿ: ಬಿಜೆಪಿ-ಆರ್‌ಎಸ್‌ಎಸ್ ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಕೇವಲ ಮಣಿಪುರ ಅಷ್ಟೇ ಅಲ್ಲ, ಖುರ್ಚಿಗಾಗಿ ದೇಶವನ್ನು ಬೇಕಿದ್ದರೆ ಸುಡುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ.
ಯೂಥ್ ಕಾಂಗ್ರೆಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು,‌ ಬಿಜೆಪಿ-ಆರ್‌ಎಸ್‌ಎಸ್‌ಗೆ ಕೇವಲ ಅಧಿಕಾರದ ಮೇಲೆ ಮಾತ್ರ ಆಸಕ್ತಿ. ಅವರಿಗೆ ಜನರ ದುಃಖ ಮತ್ತು ನೋವಿನ ಬಗ್ಗೆ ಎಂದಿಗೂ ಕಾಳಜಿ ಮಾಡಲ್ಲ. ತಮ್ಮ ಅಧಿಕಾರಕ್ಕಾಗಿ ದೇಶವನ್ನೇ ಮಾರಾಟ ಮಾಡಬಲ್ಲರು. ದೇಶವನ್ನು ವಿಭಜಿಸುವ ಕೆಲಸ ಅವರು ಮಾಡುತ್ತಾರೆ ಎಂದು ರಾಹುಲ್‌ ಆರೋಪಿಸಿದ್ದಾರೆ.

Exit mobile version