Home ಸುದ್ದಿ ರಾಜ್ಯ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ರಚನೆ

ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ರಚನೆ

0

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯನ್ನು ನೇಮಕ ಮಾಡಿದೆ. ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ನೇಮಕವಾಗಿದ್ದು, ಸದಸ್ಯರಾಗಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿ ವೈ ವಿಜಯೇಂದ್ರ ಸೇರಿ 25 ಸದಸ್ಯರು ಈ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ. ಚುನಾವಣೆ ನಿರ್ವಹಣಾ ಸಂಚಾಲಕರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕಗೊಂಡಿದ್ದಾರೆ. ಆದರೆ ಈ ಬಾರಿ ಯಡಿಯೂರಪ್ಪ ಬದಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನದ ಹೊಣೆ ನೀಡಲಾಗಿದೆ. ಬಿಎಸ್​ವೈ ಅವರನ್ನು ಪ್ರಚಾರ ಸಮಿತಿಯ ಮೊದಲ ಸದಸ್ಯರಾಗಿ ನೇಮಕ ಮಾಡಲಾಗಿದೆ. ಬಿಜೆಪಿಯ ಈ ಪ್ರಚಾರ ಸಮಿತಿಯಲ್ಲಿ ಸಚಿವ ಸುಧಾಕರ್, ರಮೇಶ್ ಜಾರಕಿಹೊಳಿ, ಎಸ್ ಟಿ ಸೋಮಶೇಖರ್​, ಸಚಿವ ಆರ್ ಅಶೋಕ್, ಅಶ್ವಥ್ ನಾರಾಯಣ್ ಪ್ರಚಾರ ಸಮಿತಿಯಲ್ಲಿ ಅವಕಾಶ ನೀಡಲಾಗಿದೆ.

ಚುನಾವಣಾ ಪ್ರಚಾರ ಸಮಿತಿ

ಚುನಾವಣಾ ನಿರ್ವಹಣಾ ಸಮಿತಿ

Exit mobile version