Home ನಮ್ಮ ಜಿಲ್ಲೆ ಬಿಜೆಪಿ ನಿಮ್ಮ ಹತ್ತಿರ ಇದೆಯಾ ಉತ್ತರ: ಕಾಂಗ್ರೆಸ್‌ ಅಭಿಯಾನ

ಬಿಜೆಪಿ ನಿಮ್ಮ ಹತ್ತಿರ ಇದೆಯಾ ಉತ್ತರ: ಕಾಂಗ್ರೆಸ್‌ ಅಭಿಯಾನ

0

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಮತ್ತೊಂದು ಹೋರಾಟಕ್ಕೆ ಮುಂದಾಗಿದೆ. ಬಿಜೆಪಿ ನಿಮ್ಮ ಹತ್ತಿರ ಇದೆಯಾ ಉತ್ತರ ಅಭಿಯಾನವನ್ನು ಕಾಂಗ್ರೆಸ್‌ ಆರಂಭಿಸಿದೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಚುನಾವಣೆಗೂ ಮುನ್ನ 600ಕ್ಕೂ ಹೆಚ್ಚು ಭರವಸೆಗಳನ್ನು ನೀಡಿದ್ದ ಬಿಜೆಪಿ ಶೇ. 90ರಷ್ಟು ಭರವಸೆಗಳನ್ನು ಈಡೇರಿಸಿಲ್ಲ ಎಂದು ದೂರಿದರು.
ಹಲವು ಭರವಸೆಗಳು ಹಾಗೆಯೇ ಉಳಿದಿದ್ದು, ಯಾವಾಗ ಈಡೇರಿಸುತ್ತೀರಿ?, ರಾಜ್ಯದ ಪ್ರತಿಯೊಬ್ಬ ಕಾರ್ಯಕರ್ತರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರ ನೀಡಿದ ಭರವಸೆಯನ್ನು ಯಾಕೆ ಈಡೇರಿಸಿಲ್ಲ ಎಂದು ಪ್ರಶ್ನಿಸುವ ಕಾರ್ಯ ಆರಂಭಿಸಬೇಕು. ರಾಜ್ಯದ ಎಲ್ಲಾ ಕಡೆ ಸರ್ಕಾರವನ್ನು ಪ್ರಶ್ನಿಸುವ ಕಾರ್ಯ ಆಗಬೇಕು ಎಂದು ಸುರ್ಜೇವಾಲ ವಿವರಿಸಿದರು.

Exit mobile version