ಬಿಜೆಪಿ ಪರ ಅಧಿಕಾರಿ ಮತ ಚಲಾವಣೆ: ಉದ್ವಿಗ್ನ ಸ್ಥಿತಿ

0
24

ಕಲಬುರಗಿ: ಚುನಾವಣಾ ಅಧಿಕಾರಿಯೊಬ್ಬರು ಮತದಾರರ ಪರವಾಗಿ ಬಿಜೆಪಿ ಪರ ಬಟನ್ ಒತ್ತಿದ ಘಟನೆ ಚಿತ್ತಾಪುರ ತಾಲ್ಲೂಕಿನ ಚಾಮನೂರು ಗ್ರಾಮದಲ್ಲಿ ನಡೆದ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತು.

ಬಿ.ಸಿ. ಚವ್ಹಾಣ ಎಂಬ ಚುನಾವಣಾ ಅಧಿಕಾರಿ ಮೇಲೆ ಆರೋಪ ಬಂದಿದ್ದು ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ನಂತರ ಚಿತ್ತಾಪುರ ಚುನಾವಣಾಧಿಕಾರಿ ನವೀನ್ ಕುಮಾರ್ ಯು. ಅಧಿಕಾರಿಯನ್ನು ಬದಲಾಯಿಸಿದರು.

ಬಸಮ್ಮ ಎಂಟುಮನ್ ಎಂಬ ಮಹಿಳೆ ಮತಗಟ್ಟೆಗೆ ಹೋಗಿ ಕಾಂಗ್ರೆಸ್ ಅಭ್ಯರ್ಥಿಯ ಚಿಹ್ನೆಗೆ ಬಟನ್ ಒತ್ತಲು ತಿಳಿಸಿದ್ದಾಳೆ. ಆದರೆ ಚುನಾವಣಾಧಿಕಾರಿ ಬಿಜೆಪಿ ಅಭ್ಯರ್ಥಿಯ ಮುಂದಿರುವ ಬಟನ್ ಒತ್ತಿದ್ದಾರೆ. ಅದು ಮಹಿಳೆ ಗಮನಕ್ಕೆ ಬಂದು ಆಕ್ಷೇಪ ವ್ಯಕ್ತಪಡಿಸಿದಾಗ ಘಟನೆ ಬಯಲಿಗೆ ಬಂದಿದೆ.

ಇದಕ್ಕೂ ಮೊದಲು ಮತಯಂತ್ರ ಪರೀಕ್ಷೆ ಸಮಯದಲ್ಲಿ ಸಹ ಬಿಜೆಪಿಯ ಸುಮಾರು ಐವತ್ತಕ್ಕೂ ಅಧಿಕ ಅಧಿಕ ಮತ ಹಾಕಲಾಗಿದೆ ಎಂದು ಹೇಳಲಾಗಿದ್ದು, ಸ್ಥಳೀಯರು ವಿರೋಧ ವ್ಯಕ್ತವಾಯಿತು ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡ ಭಗವಾನ್ ‘ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಪ್ರಿಯಾಂಕ್ ಖರ್ಗೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು ಬದಲಾಯಿಸುವಂತೆ ಚುನಾವಣಾ ಅಧಿಕಾರಿ ಮೇಲೆ ಒತ್ತಡ ಹೇರಿದ ಮೇಲೆ ಅವರನ್ನು ಬದಲಾಯಿಸಲಾಯಿತು.

ಆರೋಪಿಯನ್ನು ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ.

Previous articleಮತದಾನ ಮಾಡಲಾಗದೆ ಮಾಜಿ ಯೋಧನ ಪರದಾಟ
Next articleದಾವಣಗೆರೆ ಜಿಲ್ಲೆಯಲ್ಲಿ ಶೇ 20.78 ಮತದಾನ