Home ತಾಜಾ ಸುದ್ದಿ ಬಿಜೆಪಿ ಬಿಟ್ಟು ‘ಕೈ’ ಹಿಡಿದ ಮಾಜಿ ಶಾಸಕ ವಿಶ್ವನಾಥ ‌ಪಾಟೀಲ ಹೆಬ್ಬಾಳ

ಬಿಜೆಪಿ ಬಿಟ್ಟು ‘ಕೈ’ ಹಿಡಿದ ಮಾಜಿ ಶಾಸಕ ವಿಶ್ವನಾಥ ‌ಪಾಟೀಲ ಹೆಬ್ಬಾಳ

0

ಬೆಂಗಳೂರು: ಬಿಜೆಪಿಯ ಮಾಜಿ ಶಾಸಕರಾದ ಶ್ರೀ ವಿಶ್ವನಾಥ ಪಾಟೀಲ ಹೆಬ್ಬಾಳ ಅವರು ತಮ್ಮ ಸಂಗಡಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಗೊಂಡರು. ಬಿಜೆಪಿ ಚಿತ್ತಾಪುರ ಕ್ಷೇತ್ರದಿಂದ ರೌಡಿ ಶೀಟರ್ ಮಣಿಕಂಠ ರಾಠೋಡಗೆ ಟಿಕೆಟ್ ನೀಡಿತ್ತು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ವಿಶ್ವನಾಥ ‌ಪಾಟೀಲ ಅವರು ಈಗಾಗಲೇ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಅರವಿಂದ ಚವ್ಹಾಣಗೆ ನೀಡಬೇಕು ಎಂದು ಮನವಿ ಮಾಡಿದ್ದರು. ಆದರೆ, ಹೈಕಮಾಂಡ್ ನಿರ್ಧಾರ ಬದಲಿಸಿರಲಿಲ್ಲ. ಇಂದು ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದರು.

Exit mobile version