Home ತಾಜಾ ಸುದ್ದಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ

0

ಬೆಂಗಳೂರು: ಬಿಜೆಪಿಯ ನೂತನ ರಾಜಾಧ್ಯಾಕ್ಷರಾಗಿ ಬಿವೈ ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು.
ನಳಿನ್‌ ಕುಮಾರ್‌ ಕಟೀಲ್‌ ಅವರು ಅಧಿಕಾರ ಹಸ್ತಾಂತರಿಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು ನಾನು ರಾಜ್ಯಾಧ್ಯಕ್ಷನಾಗುವ ಮುಂಚೆ ನಾನು ಬಿಜೆಪಿ ಕಾರ್ಯಕರ್ತ. ಆದರೆ ಬಿಜೆಪಿ ರಾಜ್ಯಾಧ್ಯಕ್ಷನಾದ ಮೇಲೆ ನಾನು ಲಿಂಗಾಯತ, ಒಕ್ಕಲಿಗ ಎಂಬ ಜಾತಿ ಭೇದ ಮಾಡದೆ ಬಿಜೆಪಿಯ ಅಧಿಕಾರಕ್ಕೆ ತರಲು ಶ್ರಮ ಹಾಕಬೇಕಿದೆ. ಈ ನಾಡಿನ ಅಭಿವೃದ್ದಿಗೆ ಒತ್ತು ಕೊಡಬೇಕಿದೆ. ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ. ನನ್ನ ಮೇಲೆ ವಿಶ್ವಾಸ ಇಟ್ಟು ನೇಮಕ ಮಾಡಿದ ಎಲ್ಲ ನಾಯಕರಿಗೆ ಈ ಸಂದರ್ಭದಲ್ಲಿ ನಾನು ಅಭಾರಿಯಾಗಿದ್ದೇನೆ, ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆಲ್ಲುವ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಆಗಿರುವ ಹಿನ್ನಡೆಯನ್ನು ಸರಿಪಡಿಸಿಕೊಳ್ಳೋಣ ಎಂದರು.

Exit mobile version