ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎರಡನೇ ಪಟ್ಟಿ ಸಿದ್ಧ ಮಾಡುವಾಗ ನಮ್ಮ ಶಾಸಕರಿಗೆ ಕರೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡದಿ ಅವರು, ಡಿಕೆಶಿ ನಮ್ಮ ಶಾಸಕರನ್ನು ಸಂಪರ್ಕಿಸಿರುವುದು ಅವರ ಪರಿಸ್ಥಿತಿ ತೋರಿಸುತ್ತದೆ. ಗಟ್ಟಿಯಾದ ಅಭ್ಯರ್ಥಿಗಳಿದ್ದಿದ್ದರೆ ನಮ್ಮ ಶಾಸಕರಿಗೆ ಕರೆ ಮಾಡುತ್ತಿರಲಿಲ್ಲ. ಸಾರಾಸಗಟಾಗಿ ಎಲ್ಲರಿಗೂ ಕರೆ ಮಾಡಿ ನಮ್ಮದಿನ್ನೂ ನಿರ್ಣಯವಾಗಿಲ್ಲ, ನೀವು ಬಂದರೆ ನಿಮಗೆ ಟಿಕೆಟ್ ಕೊಡುವುದಾತ್ತೇವೆ ಎಂದು ಹೇಳಿದ್ದಾರೆ ಎಂದರು. ನಮ್ಮ ಪಕ್ಷದವರು ಬರುವುದಿಲ್ಲ ಎಂದು ತಿಳಿಸಿದ್ದಾರೆ. ಕಾಂಗ್ರೆಸ್‌ಗೆ ಅಭ್ಯರ್ಥಿಗಳ ಕೊರತೆ ಎದುರಾಗಿದೆ. ವಲಸಿಗರು ಸೇರಿದಂತೆ ಮೂಲ ಬಿಜೆಪಿ ಶಾಸಕರನ್ನ ಸಂಪರ್ಕ ಮಾಡಿದ್ದಾರೆ. ಈ ಬಾರಿ ಸ್ಪಷ್ಟ ಬಹುಮತದ ಮೇಲೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಏಪ್ರಿಲ್ 9ಕ್ಕೆ ಪ್ರಧಾನಿಗಳ ಭೇಟಿ
ಚುನಾವಣಾ ಪ್ರಚಾರಕ್ಕೆ ವರಿಷ್ಠರು ಬರುತ್ತಾರೆ. ಏಪ್ರಿಲ್ 9ರಂದು ಹುಲಿ ಕಾರ್ಯಕ್ರಮಕ್ಕೆ ಪ್ರಧಾನಿಗಳು ಮೈಸೂರಿಗೆ ಬರುವ ಕಾರ್ಯಕ್ರಮ ಮೊದಲೇ ನಿಗದಿಯಾಗಿತ್ತು. ಸರ್ಕಾರದ ಪೂರ್ವನಿಗದಿತ ಕಾರ್ಯಕ್ರಮ ಎಂದರು.