ದಾವಣಗೆರೆ: ದಲಿತರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ಮೇಲೆ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ದಲಿತ ದೌರ್ಜನ್ಯ ಕಾಯ್ದೆ ಅಡಿ ಹರಿಹರ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿ.ಪಿ. ಹರೀಶ್ ಅವರು ಪರಿಶಿಷ್ಟ ಜಾತಿ ಸಮುದದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸಮಾಜದ ಮುಖಂಡರೊಬ್ಬರು ದೂರು ನೀಡಿದ್ದು, ದೂರು ದಾಖಲಿಸಲಾಗಿದೆ ಎಂದು ಎಸ್ಪಿ ಡಾ. ಅರುಣ್ ತಿಳಿಸಿದ್ದಾರೆ.