ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.
ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಮುನಿರತ್ನನ್ನು ಪೊಲೀಸರು ಶನಿವಾರ ಕೋರ್ಟ್ಗೆ ಹಾಜರುಪಡಿಸಿದ್ದು, ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.
ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು.
                






















