ಬಿಜೆಪಿ ಸಂಕಲ್ಪ‌ ಯಾತ್ರೆ ವಿಫಲ: ಸಿದ್ದರಾಮಯ್ಯ

0
10
ಸಿದ್ದರಾಮಯ್ಯ

ಹುಬ್ಬಳ್ಳಿ: ಬಿಜೆಪಿಯನ್ನು ಅಧಿಕಾರದಿಂದ ಕಿತ್ತು ಹಾಕಿ, ಕಾಂಗ್ರೆಸ್ ಅಧಿಕಾರಕ್ಕೆ ತರಲು ಜನ ಸಂಕಲ್ಪ ಮಾಡಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಂಕಲ್ಪ ಯಾತ್ರೆ ವಿಫಲವಾಗಿದೆ. ಮಂಡ್ಯದಲ್ಲಿ ಕಾರ್ಯಕರ್ತರನ್ನು ಕೂಡಿಡಲು ಬಿಜೆಪಿಯವರು ಗೇಟ್‌ಗೆ ಬೀಗ ಹಾಕಿ‌ ಸಂಕಲ್ಪ ಯಾತ್ರೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಜನರು ಸಂಕಲ್ಪ ಮಾಡಿದ್ದಾರೆ ಎಂದರು.
ಆರ್ಥಿಕವಾಗಿ ಹಿಂದುಳಿವರಿಗೆ ಶೇ.10 ರಷ್ಟು ಮೀಸಲಾತಿ‌ ಕಲ್ಪಿಸುವ ಸುಪ್ರೀಂ ಕೋರ್ಟ್ ತೀರ್ಪನ್ನು ಓದಿಲ್ಲ. ಆದರೆ ನನ್ನ ಅಧ್ಯಯನದ ಪ್ರಕಾರ ಆರ್ಟಿಕಲ್ 14,15 ರ ಪ್ರಕಾರ ಅದಕ್ಕೆ ಅವಕಾಶವಿಲ್ಲ ಎಂದು ತಿಳಿದುಕೊಂಡಿದ್ದೇನೆ ಎಂದರು.
ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡುವುದಿಲ್ಲ. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ಬಗ್ಗೆ ಹು ಧಾ ಮಹಾನಗರ ಪಾಲಿಕೆ ಏನು ನಿರ್ಧಾರ ಕೈಗೊಳ್ಳುತ್ತದೆ ನೋಡೋಣ ಎಂದು ಉತ್ತರಿಸಿದರು.
ಕೆಪಿಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ‌ ಅವರ ಹಿಂದೂ ಪದದ ಕುರಿತ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲ್ ಹೇಳಿಕೆ ನೀಡಿದ್ದಾರೆ. ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು

Previous articleಹಿಂದೂ ಎಂಬ ಪದದ ಅರ್ಥ ಅಸಭ್ಯ: ಕಾಂಗ್ರೆಸ್‌ ನಾಯಕ ಸತೀಶ ಜಾರಕಿಹೊಳಿ
Next articleಕಾಂಗ್ರೆಸ್‌ನವರಿಗೆ ಹಿಂದೂ ಪದವೇ ಅಲರ್ಜಿ: ಜಗದೀಶ್ ಶೆಟ್ಟರ್